ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23 ನೇ ಸಾಲಿನ ಜಿಲ್ಲಾ ಮಟ್ಟದ  ಪಂದ್ಯಾವಳಿ ಪ್ರಶಸ್ತಿ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಈಚೆಗೆ ಈ ಶಾಲಾ ತಂಡ ವಿಜಯಪುರ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನದೊಂದಿಗೆ ಜಯ ಸಾಧಿಸಿದೆ. ವಿಭಾಗ ಮಟ್ಟದ ಪಂದ್ಯಾವಳಿಗೆ ವಿಜಯಪುರ ಜಿಲ್ಲೆಯಿಂದ ಈ ವಿಜೇತ ತಂಡ ಪ್ರತಿನಿಧಿಸಲಿದೆ. 

       ನಾಯಕಿ ಪ್ರಿಯಾಂಕಾ ಶಿವಣಗಿ ನೇತೃತ್ವದ ತಂಡದಲ್ಲಿ ಅನುಷಾ ಗುಳೇದಗುಡ್ಡ, ಸಂಜನಾ ಬಿಂಗಿ, ಸೇವಂತಿ ರಾಠೋಡ, ಹೇಮಾ ಹತ್ತರಕಿಹಾಳ, ಚಂದ್ರಕಲಾ ಹತ್ತರಕಿಹಾಳ, ಕೀತಿ೯ ಲಮಾಣಿ ಕ್ರೀಡಾ ಬಾಲೆಯರಿದ್ದರು. ಕವಿತಾ ಮಠದ ತಂಡದ ವ್ಯವಸ್ಥಾಪಕರಾಗಿದ್ದು ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಚ್.ನಾಗಣಿ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿದ್ದಾರೆ. 

       ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಅಭೂತಪೂರ್ವ ಕ್ರೀಡಾ ಕೌಶಲ್ಯ ತೋರಿ ವಿಭಾಗ ಮಟ್ಟಕ್ಕೆ ಆಯ್ಕೆಗೊಳ್ಳುವ ಮೂಲಕ ಸಂಸ್ಥೆಗೆ, ಶಾಲೆಗೆ ಹಾಗು ಆಲಮಟ್ಟಿ ಗ್ರಾಮಕ್ಕೆ ಕೀತಿ೯ ತಂದಿರುವ ಕ್ರೀಡಾಪಟು ಬಾಲೆಯರನ್ನು ಶಾಲೆಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಈ ತಂಡದ ಬಾಲೆಯರು ನಡೆಸಿದ ಸಾಂಘಿಕ ಹೋರಾಟದ ಫಲ ಗೆಲುವು ಸಾಧಿಸಿತು. ತಾಲೂಕು ಹಾಗು ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ನಿರಂತರ ಗಮನಾರ್ಹ ಸಾಧನೆ ಮೆರೆದು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಯ ಈ ಕ್ರೀಡಾ ಬಾಲಕಿಯರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಸೇರಿದಂತೆ ಶಾಲಾ ಸಿಬ್ಬಂದಿ, ಕ್ರೀಡಾ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಲಾಕ್ ಡೌನ್: ಡಿಸಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ…

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.