ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ

ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದು, ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧.೩೦ರ ವರೆಗೆ ಸಮಾವೇಶ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನ. 8 ರಂದು ನಡೆ ಯುವ ಜನಸಂಪರ್ಕ ಯಾತ್ರೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಬಸವ ರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಜನಸಂಪರ್ಕ ಯಾತ್ರೆಯಲ್ಲಿ 35 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಿಳಿಸುವುದು ಹಾಗೂ ಸಿಎಂ, ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಾಂಗ್ರೆಸ್ ನಾಯಕರ ಡೋಂಗಿತನ, ಅಪಪ್ರಚಾರವನ್ನು ಜನರ ಮುಂದೆ ತೆರೆದಿಡಲಾಗುತ್ತದೆ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.ಜನಸಂಕಲ್ಪ ಯಾತ್ರೆಯಲ್ಲಿ ಮೀಸಲಾತಿ ಹೆಚ್ಚಿಸಿರುವುದು ಸೇರಿ ಅನೇಕ ಜನಪರ ಕಾರ್ಯಗಳನ್ನು ತಮ್ಮದೆಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಹಾಗೂ ಜನತಾ ದಳದ ಮಾಜಿ ಮುಖ್ಯಮಂತ್ರಿಗಳು, ತಾವು ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ ಎಂದು ಕುಟುಕಿದರು. ಅವರು ಅಧಿಕಾರದಲ್ಲಿದ್ದಾಗ ಅವರ ಸಾಧನೆ ಏನು ಎಂಬುದನ್ನು ಜನರಿಗೆ ತಿಳಿಸಲಾಗುತ್ತದೆ ಎಂದರು.

ಸಿ ಸಿ ಪಾಟೀಲ್ ಸಚಿವ

ಗದಗ ಮತಕ್ಷೇತ್ರದ ಟಿಕೆಟ್ ಯಾರಿಗೆ ಸಿಕ್ಕರೂ ಗದಗ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ. ಸಣ್ಣ ಪುಟ್ಟ ತಪ್ಪಿನಿಂದ ಕಳೆದ ಬಾರಿ ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ. ಮುಂದೆ ಹಾಗಾಗದಂತೆ ಗಮನಿಸುತ್ತೇವೆ ಎಂದರು.ಕಾಂಗ್ರೆಸ್ ಡೋಂಗಿತನವನ್ನು ಜನರ ಮುಂದೆ ಇಡುವ ಕೆಲಸವನ್ನು ನಮ್ಮ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ತೋರ್ಪಡಿಸಲಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದೆ. ಕೊಟ್ಟವರು ನಾವು ಆದರೆ, ಕ್ರೆಡಿಟ್ ತಾವು ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಎಂದು ಹರಿಹಾಯ್ದರು.

ಕಾಂಗ್ರೆಸ್ ಒಡೆದ ಮನೆಯಾಗಿದೆ. ರಾಜ್ಯಕ್ಕೆ ಪ್ರಬಲ ವಿರೋಧ ಪಕ್ಷದ ಅಗತ್ಯವಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯ ಒಂದಾಗುವ ಮೂಲಕ ೨೦೨೩ರ ಚುನಾವಣೆಯಲ್ಲಿ ಪ್ರಬಲ ವಿರೋಧ ಪಕ್ಷವಾಗಿಯಾದರೂ ಹೊರಹೋಮಲಿದೆ ಎಂದು ಕಾಂಗ್ರೆಸ್ ವಿರುದ್ಧ ಪಾಟೀಲ ವ್ಯಂಗ್ಯವಾಡಿದರು.

ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್‌.ವಿ. ಸಂಕ ನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗ ರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ರಾಜು ಕುರಡಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ಟಿಕೆಟ್ ಹಂಚಿಕೆ ನಿರ್ಧಾರ ನನಗೆ ಮಾಡುತ್ತದೆ. ಟಿಕೆಟ್ ಸಿಗುತ್ತದೆ ಎಂಬುದು ಖಾತ್ರಿಯಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿ ಟಿಕೆಟ್ ಖಾತ್ರಿಯಾಗುವ ಅಭ್ಯರ್ಥಿ ಪರ ಚುನಾವಣೆ ಎದುರಿಸಲು ಸಿದ್ಧರಿದ್ದೇವೆ.

ಸಿ.ಸಿ. ಪಾಟೀಲ,ಲೋಕೋಪಯೋಗಿ ಸಚಿವ

Exit mobile version