ಚಿಕ್ಕನರಗುಂದ ಗ್ರಾ.ಪಂ ಅಧ್ಯಕ್ಷರಾಗಿ ಲಕ್ಷ್ಮಣ ಕಂಬಳಿ ಅವಿರೋಧ ಆಯ್ಕೆ

ಉತ್ತರಪ್ರಭ

ನರಗುಂದ: ತಾಲ್ಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 3 ನೇ ವಾರ್ಡಿನ ಲಕ್ಷ್ಮಣ ಮಲ್ಲಪ್ಪ ಕಂಬಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಬಾಪು ಹಿರೇಗೌಡ್ರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ಲಕ್ಷ್ಮಣ ಕಂಬಳಿ ಮಾತ್ರ ನಾಮಪತ್ರ ಸಲ್ಲಿಸಿದ್ದು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಚುಣಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ಲಕ್ಷ್ಮಣ ಕಂಬಳಿಗೆ ಅಧಿಕಾರ ವಹಿಸಿಕೊಟ್ಟರು.

ನೂತನ ಅಧ್ಯಕ್ಷ ಲಕ್ಷ್ಮಣ ಕಂಬಳಿ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಮಾಜಿ ಅಧ್ಯಕ್ಷ ಸಹೋದರ ಮುತ್ತು ರಾಯರಡ್ಡಿ ಹಾಗೂ ಎಲ್ಲ ಸದಸ್ಯರಿಗೂ ಅಭಿನಂದನೆ ‌ಸಲ್ಲಿಸಿದರು. ಗ್ರಾಮದ ಸರ್ವತೋಮಖ ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆಂದು ಬರವಸೆ ನೀಡಿದರು.

ಚುಣಾವಣಾಧಿಕಾರಿ ಮಂಜುಳಾ ಹಕಾರಿ ಮಾತನಾಡಿ, ಸದಸ್ಯರು, ಉಪಾಧ್ಯಕ್ಷರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಚಿಕ್ಕನರಗುಂದ ಗ್ರಾಮವನ್ನ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ರೂಪಿಸಬಹುದು.ಅಭಿವೃದ್ಧಿ ವಿಚಾರಗಳಿಗೆ ರಾಜಕಾರಣವನ್ನು ಬೆರೆಸಬಾರದು ಎಂದು ಸಲಹೆ ನೀಡಿದರು.

ಈ ಸಂಧರ್ಭದಲ್ಲಿ ಮಾಜಿ ಅಧ್ಯಕ್ಷರಾದ ಮುತ್ತು ರಾಯರಡ್ಡಿ, ಪಂ ಅಭಿವೃದ್ಧಿ ಅಧಿಕಾರಿ ಕು.ಶೈನಾಜ್ ಮುಜಾವರ್, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಶರಣಬಸಪ್ಪ ಹಳೇಮನಿ, ಸದಸ್ಯರಾದ ಬಾಪು ಹಿರೇಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶೋಭಾ ಕೋಣನ್ನವರ, ನಿರ್ಮಲಾ ತಳವಾರ, ಶಂಕ್ರಮ್ಮ ಚಲವಾದಿ, ಗ್ರಾಮದ ಹಿರಿಯರಾದ ಪಡಿಯಪ್ಪ ಮರಿಯಣ್ಣವರ, ಶ್ರೀನಿವಾಸ ರಾಯರಡ್ಡಿ, ಹನಮಂತ ಚಾವಡಿ, ಮಲ್ಲಿಕಾರ್ಜುನ ಸಾತಣ್ಣವರ, ಮಲ್ಲನಗೌಡ ಸರ್ವಮಾನೇದ, ಬಸವರಾಜ ಹೊಂಗಲ್, ಕರಗೌಡ ಚನ್ನಪ್ಪಗೌಡ್ರ, ಶಿವರಡ್ಡಿ ತಿಮ್ಮರಡ್ಡಿ, ಬಸನಗೌಡ ಮುದಿಗೌಡ್ರ, ಅಡಿವೆಪ್ಪ ಮರಿಯಣ್ಣವರ, ಇನ್ನೂ ಅನೇಕರು ಉಪಸ್ಥಿತರಿದ್ದರು.

Exit mobile version