ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್ ಸೆಟ್‌ಗಳನ್ನು ಅಳವಡಿಸುವ ಯೋಜನೆಯನ್ನು ರಾಜ್ಯ ಸಕಾ೯ರದ ಸ್ವಾಮ್ಯಕ್ಕೆ ಒಳಪಟ್ಟಿರುವ ಕನಾ೯ಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ( ಕೆ.ಆರ್.ಇ.ಡಿ.ಎಲ್) ಮೂಲಕ ಹಮ್ಮಿಕೊಳ್ಳಲಾಗಿದ್ದು ಆನ್ಲೈನ್ ಅಜಿ೯ ನೋಂದಣಿ ಪ್ರಕ್ರಿಯೆ ಕಳೆದ ಜುಲೈನಿಂದ ಆರಂಭಿಸಲಾಗಿದೆ ಎಂದು ಧಾರವಾಡ ಕೆ.ಆರ್.ಇ.ಡಿ.ಎಲ್. ಎ.ಇ.ಶ್ರೀಮತಿ ಸವಿತಾ ಮೇಟಿ ತಿಳಿದದರು.


ಇಲ್ಲಿನ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯಲ್ಲಿ ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆ ಕುರಿತು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸಕಾ೯ರದ ಸೌಲಭ್ಯಗಳನ್ನು ಪಡೆದುಕೊಂಡು ರೈತರು ತಮ್ಮ ಆಥಿ೯ಕ ಮಟ್ಟ ಸುಧಾರಿಸಿಕೊಳ್ಳಬೇಕು ಎಂದರು.
ರಾಜ್ಯ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ ಆನ್ಲೈನ್ ಅಜಿ೯ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಆನ್ಲೈನ್ ಮೂಲಕವೇ ಅಜಿ೯ ಸಲ್ಲಿಸಬೇಕು. ಒದಗಿಸಬೇಕಾದ ವಿವರಗಳನ್ನು ಕೆ.ಆರ್.ಇ.ಡಿ.ಎಲ್.ಅಧಿಕೃತ ಜಾಲತಾಣ www.kredl.Karnataka.gov.in ನಲ್ಲಿ ಹೆಚ್ಚಿನ ಮಾಹಿತಿಗಳನ್ನು ಪಡೆದು ಆಸಕ್ತರು ಅಜಿ೯ ಸಲ್ಲಿಸಬಹುದೆಂದು ಅವರು ಹೇಳಿದರು.
ಇದಕ್ಕೆ ಪ್ರಮುಖ ಮಾನದಂಡಗಳಿದ್ದು ಗಮನಿಸಬೇಕು. ರೈತರು ಜಮೀನಿನಲ್ಲಿ ಬಾವಿಯನ್ನು ಕೊರೆಸಿರಬೇಕು.ಹೊಸ ಕೃಷಿ ಪಂಪ್ ಸೆಟ್ ಗಳಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.‌ ಹಾಲಿ ವಿದ್ಯುತ್ ಸಂಪರ್ಕ ಹೊಂದಿರುವ ಪಂಪ್ ಸೆಟ್ ಗಳು ಅರ್ಹವಿರುವುದಿಲ್ಲ, ಅಜಿ೯ ಸಲ್ಲಿಸುವರು ಒಂದು ಸೌರ ಪಂಪ್ ಸೆಟ್ ಗೆ ಮಾತ್ರ ಅಜಿ೯ ಹಾಕಬೇಕು. ಈಗಾಗಲೇ ಇತರ ಅನುದಾನಿತ ಸಕಾ೯ರಿ ಪ್ರಾಯೋಜಿತ ಯೋಜನೆಗಳಡಿ ಸೌರ ಪಂಪ್ ಸೆಟ್ ಪಡೆದಿದ್ದರೆ ಅಂತಹ ಅಜಿ೯ದಾರರು ಅರ್ಹರಿರುವುದಿಲ್ಲ. ವಿದ್ಯುತ್ ಸಂಪರ್ಕ ಇಲ್ಲದ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸೌರ ಚಾಲಿತ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲು ಆದ್ಯತೆ ನೀಡಲಾಗುತ್ತಿದೆ. ಎಲ್ಲ ವರ್ಗದ ಅಜಿ೯ಗಳಲ್ಲಿ ವಿಶೇಷ ತೇತನರಿಗೆ ಶೇ 5 ರಷ್ಟು ಮೀಸಲಾತಿ ಒದಗಿಸಲಾಗಿದೆ. ಸಾಮಾನ್ಯ ಹಾಗು ಪ.ಜಾ,ಪ.ಪಂ ವರ್ಗದಲ್ಲಿ ಸೂಚಿಸಲಾಗಿರುವ ವಂತಿಗೆ ಮೊತ್ತವನ್ನು ಆಯಾ ವಿಶೇಷ ಚೇತನ ವರ್ಗದವರು ಅವರ ವಂತಿಗೆ ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 8095132100 ಗೆ ಸಂಪಕಿ೯ಸಬಹುದು ಎಂದು ಅವರು ತಿಳಿಸಿದರು.
ಈ ಯೋಜನೆಯ ಹೆಸರಿನಲ್ಲಿ ನಕಲಿ ಜಾಲತಾಣಗಳು ರೈತರನ್ನು ವಂಚಿಸುತ್ತಿದ್ದು ಮೋಸ ಹೋಗದಿರಲು ಎಚ್ಚರಿಕೆ ವಹಿಸಬೇಕು ಎಂದು ಸವಿತಾ ಮೇಟಿ ರೈತರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…

ಗದಗನಲ್ಲಿ ಕೊರೊನಾ ಭೀತಿ: ನರಳುತ್ತಿರುವ ವ್ಯಕ್ತಿಗೆ ನೆರವು ನೀಡಲು ಭಯಪಟ್ಟ ಜನತೆ!

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರುವಿಗೆ ಯಾರೊಬ್ಬರು ಮುಂದಾಗದ ಅಮಾನವೀಯ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.

ಗದಗ ಜಿಲ್ಲೆಯಲ್ಲಿಂದು 174 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 174 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3778 ಕ್ಕೆ ಏರಿಕೆಯಾಗಿದೆ.