ಉತ್ತರಪ್ರಭ ಸುದ್ದಿ
ವಿಜಯಪುರ:
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು, ಸೋಮವಾರ ಸಂಜೆ ತಮ್ಮ 82ನೇ ವಯಸ್ಸಿನಲ್ಲಿ ಇಹಲೋಕ ಪಯಣ ಮುಗಿಸಿ, ಶಿವೈಕ್ಯರಾಗಿದ್ದಾರೆ.
ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941 ರ ಅಕ್ಟೋಬರ್ 24 ರಂದು ಜನಿಸಿದ್ದ ಶ್ರೀಗಳು ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4ನೇ ತರಗತಿವರೆಗೆ ಓದಿದ್ದು ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು.
ಬಾಲ್ಯದಲ್ಲಿಯೇ ಅವರನ್ನು ಗುರುತಿಸಿದ ಹಿರಿಯ ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರನ್ನು ಕರೆದುಕೊಂಡು ಹೊಗುತ್ತಿದ್ದರು. ಇದರ ಜೊತೆಗೆನೆ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವAತೆ ನೋಡಿಕೊಂಡರು.
ಸಿದ್ದೇಶ್ವರ ಶ್ರೀಗಳು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು. ಅವರು ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು.
ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದ್ದು ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು.
ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳು ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.
ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದು ಪ್ರಸಿದ್ಧರಾದ ಅವರು ಕರ್ನಾಟಕದ ವಿಜಯಜಪುರದ ಜ್ಞಾನಯೋಗಾಶ್ರಮದ ಸಂಸ್ಥಾಪಕರಾಗಿದ್ದಾರು. ಶ್ರೀಗಳವರು ತಮಗೆ ಭಾರತ ಸರ್ಕಾರ ಘೋಷಿಸಿದ್ದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ಅತ್ಯುನ್ನತ ಪ್ರಶಸ್ತಿಗಳನ್ನು ವಿನಯಪೂರ್ವಕವಾಗಿ ನಿರಾಕರಿಸಿದ್ದರು ಎಂಬುದು ಗಮನಾರ್ಹ ಸಂಗತಿಯಾಗಿದೆ.
ಸಿದ್ದೇಶ್ವರ ಶ್ರೀಗಳು ತಮ್ಮ ಹಲವು ಪ್ರವಚನಗಳಲ್ಲಿ ಬದುಕುವದು ಹೇಗೆ ಹಾಗೂ ಬದುಕಲು ಹೇಗೆ ದಾರಿ ಮಾಡಿಕೊಳ್ಳಬೇಕು ಹಾಗೂ ಸರಳವಾದ ನಡೆನುಡಿಯಿಂದ ಕೋಟ್ಯಂತರ ಭಕ್ತರ ಮನದಲ್ಲಿ ಶಾಶ್ವತ ಸ್ಥಾನಪಡೆದಿರುವ ವಿರಾಗಿ ಜ್ಞಾನಯೋಗಾಶ್ರಮ ಸಿದ್ಧೇಶ್ವರ ಶ್ರೀಗಳು, ಆಧ್ಯಾತ್ಮ, ವೇದಾಂತವನ್ನು ದೃಷ್ಟಾಂತಗಳ ಮೂಲಕ ಎಳೆಎಳೆಯಾಗಿ ಬಿಡಿಸಿ ಹೇಳುತ್ತಿದ್ದರು. ಸಿದ್ಧೇಶ್ವರ ಶ್ರೀಗಳು, ವಿಶ್ವಾದ್ಯಂತ ಇರುವ ಒಳ್ಳೆಯ ಅಂಶಗಳನ್ನೆಲ್ಲಾ ಒಟ್ಟುಗೂಡಿಸಿ ಅದನ್ನು ಸರಳವಾಗಿ ಅರ್ಥೈಸುವಂತೆ ತಮ್ಮ ಪ್ರವಚನಗಳಲ್ಲಿ ವಿವರಿಸುತ್ತಿದ್ದರು.
ವಿಶ್ವಾದ್ಯಂತ ಅಸಂಖ್ಯಾತ ಭಕ್ತವೃಂದವನ್ನು ಹೊಂದಿರುವ ಶ್ರೀಗಳು, ಸುತ್ತಲಿನ ಪರಿಸರವನ್ನು ಆರಾಧಿಸುವ ಮೂಲಕ ಬದುಕನ್ನು ಅರಿತುಕೊಂಡು, ದೇವನ ಅಸ್ತಿತ್ವವನ್ನು ಅರ್ಥೈಸಿಕೊಂಡು, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದನ್ನು ಸರಳವಾಗಿ ಪ್ರವಚನಗಳಲ್ಲಿ ಪ್ರಸ್ತುತಪಡಿಸುವುದು ಭಕ್ತರ ಹೃದಯದಲ್ಲಿ ಶಾಶ್ವತ ಸ್ಥಾನವನ್ನು ಗಳಿಸಿದೆ.

ನಾಳೆ ಸಂಜೆ 5 ಗಂಟೆಗೆ ಶ್ರೀಗಳವರ ಸಂಕಲ್ಪದ ಪ್ರಕಾರದಂತೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಶ್ರೀಗಳವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚನೆ ನೀಡಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶ್ರೀಗಳ ಅಂತಿಮ ದರ್ಶನ ಪಡೆಯುವುದಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ

ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.

ಮೋಟಾರ್ ರಿವೈಂಡಿಗ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವರದಿ: ವಿಠಲ ಕೆಳೂತ್ ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ…

ಪಟ್ಟಣದ ಅಭಿವೃದ್ಧಿಗೆ ಸದಾ ಸಿದ್ಧ : ಮಿಥುನ್ ಜಿ ಪಾಟೀಲ

ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು…