ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದಕರ ಸಂಗತಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿನ ಸಿಬ್ಬಂದಿಯ ಕಿರುಕುಳವೂ ಹೆಚ್ಚಾಗಿದೆ. ಶಿಕ್ಷಕ ನೋರ್ವ ತಾಲ್ಲೂಕು ಆಡಳಿತ ಕಚೇರಿ ಎದುರೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಸಿಂದಗಿಯಲ್ಲಿ ನಿರ್ಮಾಣವಾಗುವುದಕ್ಕೆ ಕಾರಣೀಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ರೀತಿ ಬಿಇಓ ಹಾಗೂ ಕಚೇರಿ ಸಿಬ್ಬಂದಿಯ ಕಿರುಕುಳ ಹೆಚ್ಚಾದರೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಬಿಇಓ ಅಮಾನತ್ತಿಗೆ ಆಗ್ರಹ;
ಸಿಂದಗಿ ಬಿಇಓ ಅವರನ್ನು ತಕ್ಷಣವೇ ಅಮಾನತ್ತು ಮಾಡಬೇಕು, ಇಲ್ಲದಿದ್ದರೆ ಅವರ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.