ಪ್ರಧಾನಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುವು ಕರುಣೆ ಇಲ್ಲ: ಜಿ.ಎಸ್.ಪಾಟೀಲ್ ಆರೋಪ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದಲ್ಲಿ 3 ತಿಂಗಳಿಂದ ಹೋರಾಟ ನಡೆಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಹಿಂಪಡೆಯುವ ಚಿಂತನೆ ನಡೆಸುತ್ತಿಲ್ಲ. ಆದ್ದರಿಂದ ಫೆ.20 ರಂದು ಜಿಲ್ಲೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.