Browsing Tag
ಕೇಂದ್ರ
15 posts
ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ
ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ
ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಯೋಗ್ಯ ಅಭ್ಯರ್ಥಿ ಕುಬೇರಪ್ಪ: ಎಚ್.ಕೆ.ಪಾಟೀಲ್
ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಡಾ. ಆರ್.ಎಂ ಕುಬೇರಪ್ಪ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರು ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸಲು ಯೋಗ್ಯ ಅಭ್ಯರ್ಥಿಯಾಗಿದ್ದಾರೆ ಎಂದು ಶಾಸಕ ಹಾಗೂ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ.ಪಾಟೀಲ್ ಹೇಳಿದರು.
ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ
ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.