ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಕೊರೊನಾ ವಿರುದ್ಧ ಔಷಧಿ ಕಂಡು ಹಿಡಿಯುವ ಹಾದಿಯಲ್ಲಿ ಇಸ್ರೇಲ್?
ಕೊರೊನಾ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ
ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.
ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಎಷ್ಟು ಗೊತ್ತಾ?
ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ.
ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ.
ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.
ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ ರಾಜ್ಯದ ಸರಾಸರಿ ಶೇ.3.13 ಇದೆ.
ಕೋವಿಡ್-19 ನಿಯಂತ್ರಣ : ಜಿಲ್ಲೆಯಲ್ಲಿ 2 ವಾರ ಪ್ರತಿಬಂಧಕಾಜ್ಞೆ ಮುಂದುವರಿಕೆ
ಕೋವಿಡ್ -19 ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ ನಿಗದಿತ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚಾರ ನಿಷೇಧಿಸಿದೆ.
ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.