ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗನನ್ನು ಕಣಕ್ಕೆ ಇಳಿಸಿದ್ದರು.
ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.
ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ
ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.
ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ
ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.