ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.

ಪ್ರಾಮಾಣಿಕ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ: ಹೊಂಬಾಳಿಮಠ

ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು.

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಪದಕಕ್ಕೆ 115 ಪೊಲೀಸ್ ಸಿಬ್ಬಂದಿ ಆಯ್ಕೆ

ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಸದರು ದನ ಕಾಯುತ್ತಿದ್ದಾರೆಯೇ? ಪ್ರಧಾನಿಯನ್ನು ರಾಜ್ಯಕ್ಕೆ ಕರೆಯಿಸಿ..!

ರಾಯಚೂರು : ರಾಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.