ಡಿಕೆಶಿ ಮಗಳ ಮದುವೆ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಹಾಗೂ ಡಿ.ಕೆ.ಶಿವಕುಮಾರ್ ಪುತ್ರಿಯ ಮದುವೆಯಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದಿನ ಮದುವೆಗೆ ಒಟ್ಟು ೮೦೦ ಗಣ್ಯರಿಗೆ ಆಹ್ವಾನ ನೀಡಲಾಗಿದೆ.