ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನು ಬರೆದುಕೊಡ್ತಿದ್ದೆ ಅಂತ ನಟ ಶಿವಣ್ಣ ಹೇಳಿದ್ದು ಯಾಕೆ?

ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡುವಾಗೆಲ್ಲಾ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗುತ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ರೈತರಿಗೆ ನಮ್ಮ ಬೆಂಬಲ ಖಂಡಿತಾ ಇದ್ದೇ ಇರುತ್ತೆ. ಆದರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡುತ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಬೇಸರ ವ್ಯಕ್ತಪಡಿಸಿದ್ದಾರೆ.