ನಾಲ್ಕು ವರ್ಷವಾದರೂ ಆದರಹಳ್ಳಿಯಲ್ಲಿ ಆರಂಭವಾಗದ ಶುದ್ಧ ಕುಡಿಯುವ ನೀರಿನ ಘಟಕ
ಲಕ್ಷ್ಮೇಶ್ವರ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ಉದ್ದೇಶದಿಂದ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಯಿತು. ಆದರೆ ಸ್ಥಳೀಯ ಮಟ್ಟದಲ್ಲಿ ನಿರ್ವಹಣೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಇಲ್ಲದಂತಾಗಿದೆ.