ರೋಣಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ
ರೋಣ: ಕೋವಿಡ್ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.