Browsing Tag
Karanataka
36 posts
ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?
ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.
ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?
ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.
ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ
ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪಿಯು ಪರೀಕ್ಷೆಗೆ ನಿಯಮವೇನು?
ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.
ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?
ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.
ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!
ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.
ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!
ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.
ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ
ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.