ಗದಗ, ಶಿರಹಟ್ಟಿ, ಮುಂಡರಗಿ, ರೋಣ ತಾಲೂಕಿನ ಗ್ರಾಮಗಳಿಗೂ ಕಾಲಿಟ್ಟ ಕೊರೊನಾ!
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಪತ್ತೆಯಾಗಿದ್ದ ಪ್ರಕರಣಗಳು ಈಗ ಗ್ರಾಮೀಣ ಭಾಗದಲ್ಲಿ ಕಂಡು ಬರುತ್ತಿವೆ. ಇದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೊರೊನಾ ಕಾಟ ಶುರುವಾಗಿದೆ.
ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.
ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!
ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.