Browsing Tag
new dehli
22 posts
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ
ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.
FasTag : NHAI ನಿಯಮದಲ್ಲಿ ಬದಲಾವಣೆ; Minimum ಬಾಲೆನ್ಸ್ ಬಗ್ಗೆ ಇನ್ನು ಚಿಂತೆ ಬಿಟ್ಟು ಬಿಡಿ
ಎಲ್ಲಾ ವಾಹನಗಳಿಗೆ ಫೆ 15ರ ಳಗೆ ಫ್ಯಾಸ್ಟ್ ಟ್ಯಾಗ್ ಅಳವಡಿಸುವುದು ಕಡ್ಡಾಯವಾಗಿದೆ. ಆದರೆ, ಫಾಸ್ಟ್ ಟ್ಯಾಗ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸಿಕೊಳ್ಳುವ ಚಿಂತೆಯಿಂದ ಈಗ ಮುಕ್ತಿ ಸಿಕ್ಕಿದೆ. ಫಾಸ್ಟ್ ಟ್ಯಾಗ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸುವ ಅಗತ್ಯ ಇಲ್ಲ ಎಂದು, ಎನ್‌ಎಚ್‌ಎಐ (NHAI ) ಹೇಳಿದೆ. ಈ ನಿಟ್ಟಿನಲ್ಲಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ, ಈ ನಿಯಮವು ಕಾರು, ಜೀಪ್ ಅಥವಾ ವ್ಯಾನ್ ಗೆ ಮಾತ್ರ ಅನ್ವಯವಾಗಲಿದೆ. ವಾಣಿಜ್ಯ ವಾಹನಗಳಿಗೆ ಕನಿಷ್ಠ ಬಾಲೆನ್ಸ್ ಉಳಿಸಿಕೊಳ್ಳುವುದು ಈಗಲೂ ಕಡ್ಡಾಯವಾಗಿದೆ.
ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್
ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.
ನೇಪಾಳ ಮತ್ತು ಲಂಕಾದಲ್ಲಿ ಇಂಧನ ಬೆಲೆ ಅಗ್ಗವೇಕೆ: ವಿಶ್ವಂಭರ ಪ್ರಸಾದ್
ಸೀತೆಯ ನೇಪಾಳ ಹಾಗೂ ರಾವಣನ ಲಂಕಾದಲ್ಲಿ ಪೆಟ್ರೋಲ್ ದರ ಏಕೆ ಅಗ್ಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ವಿಶ್ವಂಭರ ಪ್ರಸಾದ್ ನಿಶಾದ್ ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದರು.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಶ್ನಿಸಿದ ವಿಶ್ವಂಭರ ಪ್ರಸಾದ್, ಪೆಟ್ರೋಲ್ ದರವು ಸೀತಾ ಮಾತೆಯ ನೇಪಾಳ ಹಾಗೂ ರಾವಣರ ಲಂಕಾದಲ್ಲಿ ಅಗ್ಗವಾಗಿದೆ. ಹಾಗಿದ್ದರೆ ರಾಮ ಜನ್ಮಭೂಮಿ ಭಾರತದಲ್ಲಿ ಯಾವಾಗ ಕಡಿಮೆ ಮಾಡುತ್ತೀರಿ? ಎಂದು ಕೇಳಿದರು.