ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ
ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.