ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು