ಸೇವಾಲಾಲ್ ದೇವಸ್ಥಾನಕ್ಕೆ ದಕ್ಕೆ

ಅರೇಹಳ್ಳಿ ಗ್ರಾಮದ ಗೋಮಾಳ ಜಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಂತ ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಕೆಡವಿಹಾಕಿದ್ದರಿಂದ ಬಂಜಾರ ಹಾಗೂ ಇನ್ನಿತರ ಸಮುದಾಯಗಳ ನಡುವೆ ನಡೆದ ಘರ್ಷಣೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.