ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ
ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿoದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡoತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು ತಿಳಿಸಿದ್ದಾರೆ.